ವಾಷಿಂಗ್ಟನ್, ಅ. 13 (DaijiworldNews/MB) : ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಈ ಬಗ್ಗೆ ಶ್ವೇತಭವನದ ವೈದ್ಯಾಧಿಕಾರಿ ಸೀಯಾನ್ ಕ್ಲಾನಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕು ದೃಢಪಟ್ಟ ದಿನದಿಂದಲೂ ಟ್ರಂಪ್ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಅವರಿಗೆ ಆಂಟಿಜನ್ ಪರೀಕ್ಷೆ ಸೇರಿದಂತೆ ಇತರೆ ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ ನಾಲ್ಕೈದು ದಿನದಲ್ಲಿ ಅವರ ಕೊರೊನಾ ವರದಿ ನೆಗೆಟಿವ್ ಆಗಿದೆ. ಈಗ ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆದರೂ ಕೂಡಾ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಈ ಸಂದರ್ಭದಲ್ಲೇ ಶ್ವೇತ ಭವನದಲ್ಲಿ ಬೇರೆ ಯಾರಿಗೂ ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಕೂಡಾ ತಿಳಿಸಿದ್ದಾರೆ.
ಕಳೆದ 10 ದಿನಗಳ ಹಿಂದೆ ಟ್ರಂಪ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರು ಇಲ್ಲಿನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.