ವಾಷಿಂಗ್ಟನ್, ಅ.15 (DaijiworldNews/HR): ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಬ್ಯಾರನ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮೆನಾಲಿಯಾ ಟ್ರಂಪ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮೆನಾಲಿಯಾ, ನಮ್ಮ 14ವರ್ಷದ ಪುತ್ರನಿಗೂ ಸೋಂಕು ತಗುಲಿದೆ. ಆದರೆ ಅವನಿಗೆ ಯಾವುದೇ ಲಕ್ಷಣಗಳಿಲ್ಲ, ಕಡಿಮೆ ವಯಸ್ಸಿರುವ ಕಾರಣ ಬೇಗ ಚೇತರಿಸಿಕೊಳ್ಳುತ್ತಾನೆ. ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಅವನು ಹೊಂದಿದ್ದು,ಕೊರೊನಾ ವಿರುದ್ಧ ಹೋರಾಡುತ್ತಾನೆ ಎನ್ನುವ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಮೆಲಾನಿಯಾ ಟ್ರಂಪ್ ಹಾಗೂ ಡೊನಾಲ್ಡ್ ಟ್ರಂಪ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.