ಇಸ್ಲಾಮಾಬಾದ್, ಅ. 22 (DaijiworldNews/MB) : ಗೂಢಚಾರಿಕೆ ಮತ್ತು ಭಯೋತ್ಪಾದನೆ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಪರಾಮರ್ಶೆ ಮಸೂದೆಗೆ ಪಾಕಿಸ್ತಾನ ಸಂಸತ್ತು ಅಸ್ತು ಎಂದಿದೆ. ವಿರೋದ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಕೂಡಾ ಪಾಕಿಸ್ತಾನ ರಾಷ್ಟ್ರೀಯ ಸಂಸ ಸಂಸತ್ತಿನ ಕಾನೂನು ಮತ್ತು ನ್ಯಾಯ ಸ್ಥಾಯಿ ಸಮಿತಿಯು ಶಿಕ್ಷೆ ಪರಾಮರ್ಶೆ ಮಸೂದೆಗೆ ಸಮ್ಮತಿಸಿದೆ.
ಈ ಮಸೂದೆಗೆ ಸಮಿತಿಯಲ್ಲಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ಜಮೈತ್ ಉಲೆಮಾ ಇ ಇಸ್ಲಾಂ ಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಎನ್ಆರ್ಒ ಜಾಧವ್ ಅವರಿಗೆ ಅನುಕೂಲ ಮಾಡಿಕೊಡುತ್ತದೆ ಎಂದು ಆರೋಪಿದರು.
ಪರ್ವೇಜ್ ಮುಷರಪ್ ಅವರು ಸೇನಾ ಸರ್ವಾಧಿಕಾರಿ ಆಗಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಸಮನ್ವಯ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದ್ದು ಗಡಿಪಾರಾದ ರಾಜಕೀಯ ನಾಯಕರು ಮತ್ತು ರಾಜಕಾರಣಿಗಳ ವಿರುದ್ಧದ ಗಂಭೀರ ಪ್ರಕರಣಗಳನ್ನು ಕೈಬಿಡುವಂತೆ ಆದೇಶಿಸಿದ್ದರು. ಅಂತರಾಷ್ಟ್ರೀಯ ನ್ಯಾಯಾಲಯದ ನಿರ್ದೇಶನದ ಅನುಸಾರವಾಗಿ ಈ ಮಸೂದೆ ಜಾರಿಗೆ ತೆರಲಾಗಿದ್ದು ಸಂಸತ್ತು ಅಂಗೀಕರಿಸದಿದ್ದರೆ ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಪಾಕಿಸ್ತಾನ ಉಲ್ಲಂಘಿಸಿದಂತೆ ಎಂದು ಕಾನೂನು ಮತ್ತು ನ್ಯಾಯಾಂಗ ಸಚಿವ ಫಾರೋಗ್ ನಸೀಮ್ ಅವರು ಹೇಳಿದ್ದಾರೆ.