ಇಸ್ಲಾಮಾಬಾದ್, ಅ. 29 (DaijiworldNews/MB) : 2014ರಲ್ಲಿ ನಡೆದ ಪಾಕಿಸ್ತಾನ ಸಂಸತ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಖುಲಾಸೆಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಇಮ್ರಾನ್ ಖಾನ್ ಅವರನ್ನು ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಖುಲಾಸೆಗೊಳಿಸಿದ್ದರು ಕೂಡಾ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಸೇರಿದಂತೆ ಇತರ ಹಿರಿಯ ಸಚಿವರಿಗೆ ಭಯೋತ್ಪಾದನಾ ನಿಗ್ರಹ ಕೋರ್ಟ್ ದೋಷಾರೋಪಣೆಗಾಗಿ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಪ್ರಸ್ತುತ ಆಡಳಿತ ನಡೆಸುತ್ತಿರುವ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಮತ್ತು ಪಾಕಿಸ್ತಾನ ಅವಾಮಿ ತೆಹ್ರೀಕ್(ಪಿಎಟಿ) ಪಕ್ಷದ ಕಾರ್ಯಕರ್ತರು ಆಗಸ್ಟ್ 31, 2014 ರಂದು ಸಂಸತ್ ಮತ್ತು ಪ್ರಧಾನಿ ಕಚೇರಿಗೆ ಮುತ್ತಿಗೆ ಹಾಕಿದ್ದು ಈ ಸಂದರ್ಭದಲ್ಲಿ ನಡೆದ ಸಂಘರ್ಷದಲ್ಲಿ ಮೂವರು ಸಾವನ್ನಪ್ಪಿ ಸುಮಾರು 26 ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಇತರ ನಾಯಕರ ವಿರುದ್ಧ ಪೊಲೀಸರು ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.