ವಾಷಿಂಗ್ಟನ್, ನ.15 (DaijiworldNews/HR): ಅಮೇರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ವಾಷಿಂಗ್ಟನ್ನ ಡಿಸಿಯಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸುತ್ತಿರುವುದಾಗಿ ವರದಿಯಾಗಿದೆ.
ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಗೆಲುವು ಸಾಧಿಸಿದ್ದು, ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಟ್ರಂಪ್ ಬೆಂಗಲಿಗರು ವಾಷಿಂಗ್ಟನ್, ಅರಿಜೋನಾ, ಫ್ಲಾರಿಡಾಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನು ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್ ಪರ ಲಕ್ಷಾಂತರ ಬೆಂಬಲಿಗರು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಜೋ ಬಿಡೆನ್ ಬೆಂಬಲಿಗರೂ ಕೂಡ ಸ್ಥಳಕ್ಕೆ ಬಂದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಹಿಂಸಾಚಾರ ನಡೆದಿರುವುದಾಗಿ ವರದಿಯಾಗಿದೆ.