ವಾಷಿಂಗ್ಟನ್, ನ.21 (DaijiworldNews/PY): "ಡೊನಾಲ್ಡ್ ಟ್ರಂಪ್ ಅವರ ಹಿರಿಯ ಪುತ್ರನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಕ್ವಾರಂಟೈನ್ನಲ್ಲಿದ್ದಾರೆ. ರೋಗದ ಯಾವುದೇ ಗುಣ ಲಕ್ಷಣಗಳು ಇಲ್ಲದಿದ್ದರೂ ಕೂಡಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ" ಎಂದು ವಕ್ತಾರರು ತಿಳಿಸಿದ್ದಾರೆ.
"ಡೊನಾಲ್ಡ್ ಟ್ರಂಪ್ ಜೂನಿಯರ್ಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಕ್ವಾರಂಟೈನ್ನಲ್ಲಿರುವಂತೆ ವೈದ್ಯರು ತಿಳಿಸಿದ್ದಾರೆ. ಜೂನಿಯರ್ ಟ್ರಂಪ್ ಅವರಿಗೆ ಈ ವಾರದ ಆರಂಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಅವರು ಕ್ವಾರಂಟೈನ್ಗೆ ಒಳಗಾಗಿದ್ದರು" ಎಂದು ವಕ್ತಾರರು ತಿಳಿಸಿದ್ದಾರೆ.
ಜೂನಿಯರ್ ಟ್ರಂಪ್ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ. ಜೂನಿಯರ್ ಟ್ರಂಪ್ಗೆ ಕೊರೊನಾ ದೃಢಪಟ್ಟ ಬಳಿಕ ಅವರ ಜೊತೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ.