ಕಠ್ಮಂಡು, ನ. 26 (DaijiworldNews/MB) : ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಗುರುವಾರ ನೇಪಾಳಕ್ಕೆ ಭೇಟಿ ನೀಡಿದ್ದು ಈ ಎರಡು ದಿನಗಳ ಅಲ್ಲಿ ಇರಲಿದ್ದಾರೆ ಎಂದು ವರದಿ ತಿಳಿಸಿದೆ.
ತಮ್ಮ ಎರಡು ದಿನಗಳ ಭೇಟಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾರವರು ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭಾರತ್ ರಾಜ್ ಪೌಡಿಯಲ್ ಅವರೊಂದಿಗೆ ಉಭಯ ದೇಶಗಳ ಗಡಿ ಸಮಸ್ಯೆ, ಸಹಕಾರ ಮೊದಲಾದವುಗಳ ಬಗ್ಗೆ ಮಾತನಾಡಲಿದ್ದಾರೆ. ಹಾಗೆಯೇ ನೇಪಾಳದ ವಿದೇಶಾಂಗ ಸಚಿವ ಪ್ರದೀಪ್ ಗಯಾವಲಿಯನ್ನೂ ಭೇಟಿ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.
ಗುರುವಾರ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಅಧ್ಯಕ್ಷ ವಿದ್ಯಾದೇವಿ ಭಂಡಾರಿ ಅವರನ್ನು ಭೇಟಿ ಮಾಡಲಿದ್ದು ಶುಕ್ರವಾರ ಕಠ್ಮಂಡುವಿನಲ್ಲಿ ಉಪನ್ಯಾಸ ನೀಡಲಿದ್ದಾರೆ.
ಹಾಗೆಯೇ ಬಳಿಕ ಗೂರ್ಖಾದಲ್ಲಿ ಭಾರತೀಯ ನೆರವಿನಡಿಯಲ್ಲಿ ನಿರ್ಮಿಸಲಾದ ಮೂರು ಶಾಲೆಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.