ನ್ಯೂಯಾರ್ಕ್, ಡಿ. 08 (DaijiworldNews/HR): ಭಾರತ ಮೂಲದ ತಜ್ಞ ಅನಿಲ್ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಓ) ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿನೇಮಕ ಮಾಡಲಾಗಿದ್ದು, ಜನವರಿ 1ರಂದು ಅನಿಲ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಂಬಂಧ ಈ ಪ್ರತಿಷ್ಠಾನವನ್ನು ಕಳೆದ ಮೇನಲ್ಲಿ ಸ್ಥಾಪಿಸಲಾಗಿದ್ದು, ಜಿನಿವಾದಲ್ಲಿ ಇದರ ಕೇಂದ್ರ ಕಚೇರಿ ಇದೆ.
ಇನ್ನು ಪ್ರತಿಷ್ಠಾನವು ವಿಶ್ವ ಆರೋಗ್ಯ ಸಂಸ್ಥೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತದೆ ಮತ್ತು ಆರೋಗ್ಯ ಕ್ಷೇತ್ರದಲ್ಲಿನ ಸಂಶೋಧನೆಗೆ ಒತ್ತು ನೀಡುವುದು, ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಿ, ಸ್ವಸ್ಥ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಷ್ಠಾನದ ಉದ್ದೇಶ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಅನಿಲ್ ಅವರು ಆರೋಗ್ಯ ಕ್ಷೇತ್ರದ ಪ್ರಮುಖ ಕಂಪನಿ ವಯಾಟ್ರಿಸ್ನ ಜಾಗತಿಕ ಸೋಂಕು ರೋಗಗಳ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.