ವಾಷಿಂಗ್ಟನ್, ಜ.01 (DaijiworldNews/HR): ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಎಚ್–1ಬಿ ವೀಸಾ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಮಾರ್ಚ್ 31ರವರೆಗೆ ವಿಸ್ತರಿಸಿದ್ದಾರೆ.
ಅಮೇರಿಕಾದ ಉದ್ಯೋಗಿಗಳ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದ್ದು, ಜೊತೆಗೆ ನಿರ್ಬಂಧದ ಸಂದರ್ಭದಲ್ಲಿದ್ದ ಪರಿಸ್ಥಿತಿ ಮತ್ತು ಕಾರಣಗಳು ಬದಲಾಗಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
ಕಳೆದ ವರ್ಷ ಏಪ್ರಿಲ್ 22 ಮತ್ತು ಜೂನ್ 22ರಂದು ವೀಸಾಗಳ ಮೇಲೆ ನಿರ್ಬಂಧ ವಿಧಿಸಿ ಟ್ರಂಪ್ ಆದೇಶ ಹೊರಡಿಸಿದ್ದರು. ಡಿಸೆಂಬರ್ 31ರಂದು ಈ ಆದೇಶದ ಅವಧಿ ಮುಗಿದಿತ್ತು. ಹೀಗಾಗಿ, ಟ್ರಂಪ್ ಮಾರ್ಚ್ 30ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.