ವಾಷಿಂಗ್ಟನ್, ಜ. 05 (DaijiworldNews/MB) : ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಭಾರತದ ನಾಯಕತ್ವ ಹಾಗೂ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಹೊಗಳಿದ್ದಾರೆ.
ಭಾರತದ ಪ್ರಧಾನಿ ಕಾರ್ಯಾಲಯದ ಅಧಿಕೃತ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಅವರು, ''ಕೊರೊನಾ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಜಗತ್ತು ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ನಾಯಕತ್ವ ಹಾಗೂ ಲಸಿಕೆ ಉತ್ಪಾದನಾ ಸಾಮರ್ಥ್ಯ ಅದ್ಭುತವಾದದ್ದು'' ಎಂದು ಅವರು ಹೇಳಿದ್ದಾರೆ.
ಆಕ್ಸ್ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳ ಕೋವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಈಗಾಗಲೇ ಅನುಮೋದನೆ ನೀಡಲಾಗಿದೆ.