ವಾಷಿಂಗ್ಟನ್, ಜ.12 (DaijiworldNews/HR): ಜ. 24ರವರೆಗೆ ಅಮೇರಿಕಾದ ರಾಜಧಾನಿ ವಾಷಿಂಗ್ಟನ್ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತುರ್ತು ಪರಿಸ್ಥಿತಿ ಘೋಷಿಸಿ ಆದೇಶಿಸಿದ್ದಾರೆ.
ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರು ಜ. 20ರಂದು ಅಧಿಕಾರ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ಗಲಾಟೆ ಸಂಭವಿಸುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ತಿತಿ ಹೇರುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು "ತುರ್ತು ಪರಿಸ್ಥಿತಿಯ ಸಂಧರ್ಭದಲ್ಲಿ ಜನರಿಗೆ ತೊಂದರೆಯಾಗದಂತೆ, ಆಸ್ತಿಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಆಂತರಿಕ ಭದ್ರತಾ ವಿಭಾಗ ಹಾಗೂ ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ಏಜೆನ್ಸಿಗೆ ಸೂಚನೆ ನೀಡಲಾಗಿದೆ" ಎಂದು ಶ್ವೇತಭವನದ ಪ್ರಕಟಣೆಯಲ್ಲಿ ತಿಳಿಸಿಸಲಾಗಿದೆ.