ಇಂಡೋನೇಷ್ಯಾ,ಜ.15 (DaijiworldNews/HR): ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಆಸ್ಪತ್ರೆಯೊಂದು ಕುಸಿದು ಬಿದ್ದು, ಅನೇಕ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಆಸ್ಪತ್ರೆ ಸಂಪೂರ್ಣವಾಗಿ ಕುಸಿದು ಬಿದ್ದು ಅವಶೇಷಗಳಡಿ ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಸಿಲುಕಿದ್ದಾರೆ ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಈ ಘಟನೆಯಲ್ಲಿ ಎಷ್ಟು ರೋಗಿಗಳು ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ವರದಿ ತಿಳಿಸಿದೆ.