ವಾಷಿಂಗ್ಟನ್, ಫೆ.04 (DaijiworldNews/HR): ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯಗಳ ಹೂಡಿಕೆಗಳನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸಲಾಗುವುದು" ಎಂದು ಅಮೇರಿಕಾ ಹೇಳಿದೆ.
ಭಾರತದಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಅಮೇರಿಕಾ, "ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗಿಸುತ್ತದೆ" ಎಂದು ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ಹೇಳಿದ್ದಾರೆ.
ಇನ್ನು "ಭಿನ್ನಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಎಂಬುದನ್ನು ಅಮೇರಿಕಾ ಪ್ರೋತ್ಸಾಹಿಸುತ್ತದೆ" ಎಂದು ಹೇಳಿದೆ.
"ಭಾರತದ ಸುಪ್ರೀಂ ಕೋರ್ಟ್ ಕೂಡ ಶಾಂತಿಯುತ ಪ್ರತಿಭಟನೆಯು ಏಳಿಗೆ ಹೊಂದುತ್ತಿರುವುದು ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ಉಲ್ಲೇಖಿಸಿರುವುದಾಗಿ" ತಿಳಿಸಿದ್ದಾರೆ.