ನೈಪಿತಾವ್, ಫೆ. 08 (DaijiworldNews/HR): ಮಿಲಿಟರಿ ಆಡಳಿತದ ವಿರುದ್ಧ ಮ್ಯಾನ್ಮಾರ್ನ ರಾಜಧಾನಿ ನೈಪಿತಾವ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪೊಲೀಸರು ಸೋಮವಾರ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ ಎನ್ನಲಾಗಿದೆ.
ಜಲಫಿರಂಗಿ ಪ್ರಯೋಗದ ವೇಳೆ ಅನೇಕ ಮಂದಿ ಗಾಯಗೊಂಡಿದ್ದು, ಇಬ್ಬರು ಪ್ರತಿಭಟನಕಾರರು ಪ್ರಜ್ಞೆ ತಪ್ಪಿ ಬಿದ್ದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮ್ಯಾನ್ಮಾರ್ನ ಹಿರಿಯ ನಾಯಕಿ ಆಂಗ್ ಸಾನ್ ಸೂಕಿ ಮತ್ತು ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷದ ಇತರ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.