ವಿಶ್ವಸಂಸ್ಥೆ, ಫೆ.16 (DaijiworldNews/HR): ಕೊರೊನಾ ನಿಯಂತ್ರಿಸುವುದಕ್ಕಾಗಿ ಅಸ್ಟ್ರಾಜೆನೆಕಾ-ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ಈ ಲಸಿಕೆಯನ್ನು ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ತಯಾರಿಸಿದ್ದು, ಭಾರತದಲ್ಲಿ ಸೆರಂ, ಕೊರಿಯಾದಲ್ಲಿ ಎಸ್ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ ಎನ್ನಲಾಗಿದೆ.
ಇನ್ನು "ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು, ಲಸಿಕೆಗಳನ್ನು ಅತೀ ವೇಗವಾಗಿ ವಿತರಣೆ ಮಾಡಬೇಕಿದೆ" ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸುಸ್ ತಿಳಿಸಿದ್ದಾರೆ.