ಯಾಂಗೂನ್, ಫೆ.17 (DaijiworldNrews/HR): "ಮ್ಯಾನ್ಮಾರ್ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಪ್ರತಿಭಟನೆ ಮುಂದುವರಿದಿದ್ದು, ಈ ವೇಳೆ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ" ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಎಚ್ಚರಿಕೆ ನೀಡಿದ್ದಾರೆ.
"ಈ ಹಿಂದೆಯೂ ಸೇನೆಯ ಈ ರೀತಿಯ ಚಟುವಟಿಕೆಗಳು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದು, ಹತ್ಯೆ, ಸಾಮೂಹಿಕ ಬಂಧನ ಮತ್ತು ನಾಪತ್ತೆಯಾದ ಘಟನೆಗಳೂ ನಡೆದಿವೆ. ಸದ್ಯ ಮ್ಯಾನ್ಮಾರ್ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಇದೇ ಭೀತಿಯನ್ನು ಮೂಡಿಸಿವೆ. ಸೇನೆಯು ತನ್ನ ಪ್ರಜೆಗಳ ವಿರುದ್ಧ ಅಪರಾಧ ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ" ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.
ಇನ್ನು ಮ್ಯಾನ್ಮಾರ್ನ ಅನೇಕ ಕಡೆಗಳಲ್ಲಿ ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರತಿಭಟಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.