ಕೊಲಂಬೊ, ಫೆ.22 (DaijiworldNews/MB) : ಭಾರತದೊಂದಿಗಿನ ಸಂಘರ್ಷವನ್ನು ತಪ್ಪಿಸಲೆಂದು ಶ್ರೀಲಂಕಾ ಸಂಸತ್ತಿನಲ್ಲಿ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ನಿಗದಿತ ಭಾಷಣವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.
ಶ್ರೀಲಂಕಾ ಸರ್ಕಾರವು ಈಗಾಗಲೇ ಚೀನಾದ ಸಾಲದ ಹೊರೆಯಲ್ಲಿರುವ ಹಿನ್ನೆಲೆ ಭಾರತದೊಂದಿಗಿನ ಸಂಬಂಧವನ್ನು ಮತ್ತಷ್ಟು ಬಿಕ್ಕಟ್ಟಿಗೆ ಸಿಲುಕಿಸಲು ತಯಾರಿಲ್ಲ. ಈ ಬಗ್ಗೆ ಕೊಲಂಬೊ ಗೆಜೆಟ್ ಮಾಧ್ಯಮದಲ್ಲಿ ವರದಿ ಪ್ರಕಟವಾಗಿದ್ದು, ಶ್ರೀಲಂಕಾವು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸಂಸತ್ತಿನಲ್ಲಿ ನಿಗದಿತ ಭಾಷಣವನ್ನು ರದ್ದುಗೊಳಿಸುವ ಮೂಲಕ ಭಾರತದೊಂದಿಗಿನ ಸಂಘರ್ಷವನ್ನು ತಪ್ಪಿಸಿದೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಭಾರತವು ಶ್ರೀಲಂಕಾಕ್ಕೆ ಐದು ಲಕ್ಷ ಕೋವಿಡ್-19 ಲಸಿಕೆ ಡೋಸ್ಗಳನ್ನು ಉಡುಗೊರೆಯಾಗಿ ನೀಡಿತ್ತು.