ಲಂಡನ್, ಮಾ16 (DaijiworldNews/MS): ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಬರುವ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಯೂರೋಪಿಯನ್ ಒಕ್ಕೂಟದಿಂದ ಬ್ರಿಟನ್ ಹೊರ ಹೋಗುವ ಮುನ್ನ ಭಾರತ ಪ್ರವಾಸ ಕೈಗೊಳ್ಳುವುದಾಗಿ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಘೋಷಿಸಿದ್ದಾರೆ.
ಏಪ್ರಿಲ್ ಅಂತ್ಯದಲ್ಲಿ ಭಾರತ ಪ್ರವಾಸ ಕೈಗೊಳ್ಳಲಿರುವ ಅವರು, ಇಂಡೋ ಫೆಸಿಫಿಕ್ ಪ್ರಾಂತ್ಯದಲ್ಲಿ ಇರುವ ಅವಕಾಶಗಳನ್ನು ಮುಕ್ತಗೊಳಿಸಿಕೊಳ್ಳಲು ಬ್ರಿಟನ್ ಇಚ್ಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಬೋರಿಸ್ ಜಾನ್ಸನ್ ಅವರು ಭಾರತದ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಬೇಕಿತ್ತು. ಆದರೆ, ಕೋವಿಡ್ ಪ್ರಕರಣಗಳು ಹೆಚ್ಚಳವಾದ ಹಿನ್ನಲೆಯಲ್ಲಿ ಅವರ ಭಾರತ ಪ್ರವಾಸ ರದ್ದುಗೊಂಡಿತ್ತು. ಬೋರಿಸ್ ಅವರ ಭೇಟಿ ಬ್ರಿಟನ್ಗೆ ಮಹತ್ವದ್ದಾಗಿದ್ದು, ಭಾರತದ ಪ್ರವಾಸದ ಸಂದರ್ಭದಲ್ಲಿ ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವ್ಯಾಪಾರ ವ್ಯವಹಾರ ಸೇರಿದಂತೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.