ವಾಷಿಂಗ್ಟನ್, ಮಾ.22 (DaijiworldNews/HR): ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಶಿಯಲ್ ಮೀಡಿಯಾ ಖಾತೆಗಳನ್ನುಅಮೇರಿಕಾದ ಕ್ಯಾಪಿಟಲ್ ಹಿಲ್ಸ್ ಮೇಲೆ ನಡೆದ ದಾಳಿ ಬಳಿಕ ಅಮಾನತುಗೊಳಿಸಲಾಗಿದ್ದು, ಇದೀಗ ತಮ್ಮ ಬೆಂಬಲಿಗರನ್ನು ತಲುಪಲು ಟ್ರಂಪ್ ತಮ್ಮದೇ ಆದ ಸಾಮಾಜಿಕ ಮಾಧ್ಯಮ ವೇದಿಕೆ ರಚನೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಡೊನಾಲ್ಡ್ ಟ್ರಂಪ್ ಅವರು ಎರಡು ಮೂರು ತಿಂಗಳಲ್ಲಿ ತಮ್ಮದೇ ಆದ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಪ್ರಾರಂಭಿಸಲು ಯೋಜಿಸಿದ್ದಾರೆ ಎಂದು ಅವರ ಹಿರಿಯ ಸಲಹೆಗಾರರೊಬ್ಬರು ತಿಳಿಸಿದ್ದಾರೆ.
ಆದರೆ ಈ ಸಾಮಾಜಿಕ ಮಾಧ್ಯಮ ಹೇಗಿರಲಿದೆ ಎಂಬ ಬಗ್ಗೆ ಮಿಲ್ಲರ್ ಹೆಚ್ಚಿನ ವಿವರಗಳನ್ನು ನೀಡಿಲ್ಲ, ಟ್ರಂಪ್ ಸಂಸ್ಥೆಗಳ ಅಧಿಕಾರಿಗಳಿಂದ ತಕ್ಷಣಕ್ಕೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.
ಇನ್ನು ಜನವರಿ 6ರಂದು ನಡೆದ ಕ್ಯಾಪಿಟಲ್ ಹಿಲ್ಸ್ ಹಿಂಸಾಚಾರದ ನಂತರ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವೀಟರ್, ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತು ಮಾಡಲಾಗಿತ್ತು.