ಸಿಡ್ನಿ, ಮಾ.22 (DaijiworldNews/HR): ಆಸ್ಟ್ರೇಲಿಯಾದ ಆಗ್ನೇಯ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮವಾರ ಸಿಡ್ನಿಯ ಉತ್ತರ ಭಾಗದಲ್ಲಿ 100 ವರ್ಷಗಳಲ್ಲೇ ಅತ್ಯಂತ ದೊಡ್ಡ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಭಾರಿ ಮಳೆಯಿಂದಾಗಿ ಸಾವಿರಾರು ಜನರನ್ನು ಸ್ಥಳಾಂತರಿಸಲು ಆದೇಶಿಸಲಾಗಿದ್ದು, 200ಕ್ಕೂ ಅಧಿಕ ಶಾಲೆಗಳನ್ನು ಮುಚ್ಚಲಾಗಿದೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ದೇಶದಲ್ಲೇ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ನ್ಯೂ ಸೌತ್ ವೇಲ್ಸ್ನ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಪ್ರವಾಹಕ್ಕೆ ಕಾರಣವಾಗಿದ್ದು, ಸಿಡ್ನಿಯ ವಾಯುವ್ಯ ಗಡಿಯ ಕೆಲವು ಭಾಗಗಳಲ್ಲಿ ದಶಕಗಳ ಅತಿದೊಡ್ಡ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ರಾಜ್ಯದಾದ್ಯಂತ ಈವರೆಗೆ 18,000 ಜನರನ್ನು ಸ್ಥಳಾಂತರಿಸಲಾಗಿದ್ದು, ಸೋಮವಾರ ಬೆಳಿಗ್ಗೆ 2,000 ಜನರು ಸ್ಥಳಾಂತರಿಸುವ ಆದೇಶ ಮಾಡಲಾಗಿದೆ ಎಂದು ತುರ್ತು ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.