ವಾಷಿಂಗ್ಟನ್, ಮಾ.25 (DaijiworldNews/HR): ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ ಅವರ ಆರೋಗ್ಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಮಕ್ಕಳ ವೈದ್ಯೆ ರಚೆಲ್ ಲೆವಿನ್(63) ಅವರನ್ನು ನೇಮಕ ಮಾಡಿರುವುದಕ್ಕೆ ಯು.ಎಸ್ ಸೆನೆಟ್ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ಲೆವಿನ್ ಅವರು ಲೈಂಗಿಕ ಅಲ್ಪಸಂಖ್ಯಾತರಾಗಿದ್ದು(ಟ್ರಾನ್ಸ್ಜೆಂಡರ್), ಮಕ್ಕಳ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಲೆವಿನ್ ಅವರ ನಾಮನಿರ್ದೇಶನವನ್ನು ಸೆನೆಟ್ 52- 48 ಮತಗಳ ಮೂಲಕ ಅನುಮೋದಿಸಿದ್ದು, ರಿಪಬ್ಲಿಕನ್ ಪಕ್ಷದ ಇಬ್ಬರು ಸೆನೆಟರ್ಗಳು ಸಹ ಲೆವನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಇನ್ನು ಲೆವಿನ್ ಅವರು ಆರೋಗ್ಯ ಮತ್ತು ಸಾರ್ವಜನಿಕ ಸೇವೆಗಳ ಇಲಾಖೆಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದು, ಅಮೇರಿಕಾದಲ್ಲಿ 545,000 ಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣವಾಗಿರುವ ಕೊರೊನಾ ಸೋಂಕಿನ ವಿರುದ್ಧದ ಹೋರಾಟವನ್ನು ಮುನ್ನಡೆಸುವ ಅತಿ ಮಹತ್ವದ ತಂಡವೊಂದರ ಭಾಗವಾಗಲಿದ್ದಾರೆ ಎನ್ನಲಾಗಿದೆ.