ಢಾಕಾ, ಏ.05 (DaijiworldNews/HR): ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾ ದೇಶದಲ್ಲಿ 7 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಸಾಂಧರ್ಭಿಕ ಚಿತ್ರ
ಲಾಕ್ಡೌನ್ ಅವಧಿಯಲ್ಲಿ ಸಾರಿಗೆ ವ್ಯವಸ್ಥೆ, ಮಾರುಕಟ್ಟೆ ಸೇರಿದಂತೆ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದ್ದು, ಸೋಮವಾರ ಬೆಳಗ್ಗೆ 6ಗಂಟೆಯಿಂದ ಏ.11ರ ಮಧ್ಯರಾತ್ರಿ 12ಗಂಟೆವರೆಗೂ ಲಾಕ್ಡೌನ್ ಜಾರಿಯಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಇನ್ನು ದೇಶದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವುದು ಮತ್ತು ಸಾವಿನ ಪ್ರಮಾಣವನ್ನು ನಿಯಂತ್ರಿಸಲು ಲಾಕ್ಡೌನ್ ಅನಿವಾರ್ಯವಾಗಿದೆ ಎಂದು ಬಾಂಗ್ಲಾ ಸರ್ಕಾರ ತಿಳಿಸಿದೆ.
ಬಾಂಗ್ಲಾದಲ್ಲಿ ಹೊಸದಾಗಿ 7087 ಮಂದಿಗೆ ಸೋಂಕು ತಗುಲಿದ್ದು, 53 ಮಂದಿ ಹೊಸದಾಗಿ ಸಾವನ್ನಪ್ಪಿದ್ದು, ಈವರೆಗೂ 9266 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.