ವಾಷಿಂಗ್ಟನ್, ಎ.06 (DaijiworldNews/PY): "ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಅಮೇರಿಕಾದಲ್ಲಿ ಎಪ್ರಿಲ್ 19ರಿಂದ ಯವಕರಿಗೆ ಕೊರೊನಾ ಲಸಿಕೆ ಹಾಕುವ ಕಾರ್ಯವನ್ನು ಪ್ರಾರಂಭಿಸಲಾಗುವುದು" ಎಂದು ಅಧ್ಯಕ್ಷ ಜೋ ಬಿಡೆನ್ ಘೋಷಣೆ ಮಾಡಿದ್ದಾರೆ.
"ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಕೊರೊನಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸಲಾಗಿದ್ದು, ಆದರೂ ಕೂಡಾ ಕೊರೊನಾ ಸೋಂಕು ನಿವಾರಣೆಯಾಗುತ್ತಿಲ್ಲ. ಹಾಗಾಗಿ ಪ್ರತಿಯೋರ್ವರು ಮುನ್ನಚ್ಚರಿಕಾ ಕ್ರಮ ಕೈಗೊಳ್ಳಬೇಕು" ಎಂದಿದ್ದಾರೆ.
"ನಮ್ಮ ಸರ್ಕಾರ ಕೊರೊನಾ ಹೋಗಲಾಡಿಸುವ ಕಾರ್ಯದಲ್ಲಿ ಮಗ್ನವಾಗಿದೆ. ರೂಪಾಂತರಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಕಾರಣ ಸೋಂಕು ಅಪಾಯಕಾರಿಯಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೋರ್ವರು ಮುನ್ನಚ್ಚರಿಕಾ ಕ್ರಮ ಕೈಗೊಳ್ಳಬೇಕು" ಎಂದು ಸಲಹೆ ನೀಡಿದ್ದಾರೆ.
"ಮೊದಲ ಹಂತದಲ್ಲಿ 200 ಮಿಲಿಯನ್ ನಾಗರೀಕರಿಗೆ ಕೊರೊನಾ ಲಸಿಕೆ ಹಾಕಿಸಿದ್ದರಿಂದ ಸೋಂಕು ಹೆಚ್ಚಾಗಿಲ್ಲ. ಈಗಾಗಲೇ 45 ವರ್ಷದ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗಿದೆ. ನಾವು ಲಸಿಕೆ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದ್ದೇವೆ" ಎಂದಿದ್ದಾರೆ.