ನ್ಯೂಜಿಲೆಂಡ್, ಏ. 08 (DaijiworldNews/HR): ಭಾರತದಿಂದ ನ್ಯೂಜಿಲೆಂಡ್ಗೆ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಭಾರತದಿಂದ ಬರುವವರಿಗೆ ನ್ಯೂಜಿಲೆಂಡ್ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ ಎಂದು ತಿಳಿದು ಬಂದಿದೆ.
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆನ್
ಈ ಕುರಿತು ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆನ್ ಅವರು ಕ್ರಮ ಕೈಗೊಂಡಿದ್ದು, ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಪ್ರಜೆಗಳನ್ನೂ ಒಳಗೊಂಡಂತೆ ಭಾರತದಿಂದ ನ್ಯೂಜಿಲೆಂಡ್ಗೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿರುವುದಾಗಿ ತಿಳಿಸಿದ್ದಾರೆ.
ಇನ್ನು ಏಪ್ರಿಲ್ 11ರಿಂದ ಈ ನಿರ್ಬಂಧ ಜಾರಿಗೆ ಬರಲಿದ್ದು, ಏಪ್ರಿಲ್ 28ರವರೆಗೂ ಮುಂದುವರೆಯುವುದಾಗಿ ತಿಳಿದುಬಂದಿದೆ.
ಭಾರತದಲ್ಲಿ ಮಂಗಳವಾರ 1,15,736 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.