ಲಂಡನ್, ಏ.16 (DaijiworldNews/HR): ಪಿಎನ್ಬಿ ವಂಚನೆ ಪ್ರಕರಣದಲ್ಲಿ ಯುಕೆಗೆ ಪರಾರಿಯಾಗಿದ್ದಂತ ಡೈಮಂಡ್ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಯುನೈಟೆಡ್ ಕಿಂಗ್ ಡಮ್ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.
ನೀರವ್ ಮೋದಿ ಹಸ್ತಾಂತರಕ್ಕೆ ಯುನೈಟೆಡ್ ಕಿಂಗ್ ಡಮ್ನ ಗೃಹ ಸಚಿವರು ಅನುಮೋದನೆ ನೀಡಿದ್ದಾರೆ ಎಂದು ಸಿಬಿಐ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಅಂದಾಜು 2ಬಿಲಿಯನ್ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಹಗರಣ ಪ್ರಕರಣದಲ್ಲಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನೀರವ್ ಮೋದಿ ಭಾರತಕ್ಕೆ ಬೇಕಾಗಿದ್ದಾರೆ ಎನ್ನಲಾಗಿದೆ.