ಟೊರೆಂಟೊ, ಎ.23 (DaijiworldNews/PY): ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕೆನಡಾ ಸರ್ಕಾರ, ಭಾರತ ಹಾಗೂ ಪಾಕಿಸ್ತಾನದಿಂದ ಕೆನಡಾಕ್ಕೆ ಬರುವ ಎಲ್ಲಾ ವಿಮಾನಗಳನ್ನು 30 ದಿನಗಳ ಕಾಲ ನಿಷೇಧಿಸಿದೆ.
ಸಾಂದರ್ಭಿಕ ಚಿತ್ರ
"ಭಾರತ ಹಾಗೂ ಪಾಕಿಸ್ತಾನದಿಂದ ಬರು ಪ್ರಯಾಣಿಕರಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆ ವಿಮಾನಗಳನ್ನು 30 ದಿನಗಳ ಕಾಲ ರದ್ದು ಮಾಡಲಾಗಿದೆ" ಎಂದು ಕೆನಡಾ ಸಾರಿಗೆ ಸಚಿವ ಒಮರ್ ಅಲ್ಭಾಬ್ರಾ ತಿಳಿಸಿದ್ದಾರೆ.
"ಈ ಆದೇಶವು ಗುರುವಾರ ತಡರಾತ್ರಿಯಿಂದಲೇ ಜಾರಿಗೆ ಬಂದಿದ್ದು, ಕೆನಡಾಕ್ಕೆ ಭಾರತ ಹಾಗೂ ಪಾಕಿಸ್ತಾನದಿಂದ ಆಗಮಿಸುವ ಎಲ್ಲಾ ವಾಣಿಜ್ಯ ಹಾಗೂ ಖಾಸಗಿ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದು ತಾತ್ಕಾಲಿಕ ಕ್ರಮವಾಗಿದ್ದು, ಮುಂದಿನ ಪರಿಸ್ಥಿತಿ ಬಗ್ಗೆ ಚರ್ಚಿಸಿ ನಿರ್ಬಂಧ ಮುಂದುವರಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.