ವಾಷಿಂಗ್ಟನ್,ಜೂ.07 (DaijiworldNews/HR): ಅಮೇರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ ಎಂದು ತಿಳಿದು ಬಂದಿದೆ.
ಕಮಲಾ ಹ್ಯಾರಿಸ್ ಅವರು ವಿದೇಶ ಪ್ರವಾಸದಲ್ಲಿದ್ದು, ಗ್ವಾಟೆಮಾಲಾಕ್ಕೆ ಹೊರಟಿದ್ದರು. ಆದರೆ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ.
ಇನ್ನು ವಾಷಿಂಗ್ಟನ್ ಹೊರವಲದಲ್ಲಿರುವ ಜಾಯಿಂಟ್ ಬೇಸ್ ಆಂಡ್ರ್ಯೂಸ್ನಲ್ಲಿ 'ಏರ್ ಫೋರ್ಸ್ ಟು' ವಿಮಾನ ತುರ್ತು ಭೂಸ್ಪರ್ಶ ನಡೆಸಿದ್ದು, ಇದಾದ ಬಳಿಕ ವಿಮಾನ ಬದಲಿಸಿದ ಕಮಲಾ ಹ್ಯಾರಿಸ್, ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.
ವಿಮಾನದ ಲ್ಯಾಂಡಿಂಗ್ ಗೇರ್ನಿಂದ ವಿಚಿತ್ರ ಶಬ್ದವೊಂದು ಕೇಳಿಸಿರುವ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು ಎಂದು ವರದಿಯಾಗಿದೆ.