ದುಬೈ, ಜೂ. 20 (DaijiworldNews/HR): ಕೊರೊನಾದ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಹಿನ್ನಲೆಯಲ್ಲಿ ಭಾರತ ಸೇರಿದಂತೆ ಬೇರೆ ಬೇರೆ ರಾಷ್ಟ್ರಗಳ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ದುಬೈ ಸರ್ಕಾರ ಇದೀಗ ಸಡಿಲಗೊಳಿಸಿದೆ ಎಂದು ತಿಳಿದು ಬಂದಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅನುಮೋದಿತ ಕೊರೊನಾ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರು ಭಾರತ ಸೇರಿದಂತೆ ಕೆಲವು ದೇಶಗಳ ನಿವಾಸಿಗಳು ದುಬೈಗೆ ಪ್ರಯಾಣಿಸಬಹುದು ಎಂದು ವರದಿಯಾಗಿದೆ.
ಇನ್ನು ಪ್ರಧಾನಿ ಶೇಖ್ ಮನ್ಸೂರ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಾಕ್ತೌಮ್ ನೇತೃತ್ವದ ಸಮಿತಿಯು ಈ ನಿರ್ಧಾರ ತೆಗೆದುಕೊಂಡಿದ್ದು, ಜೂನ್ 23ರಿಂದ ದಕ್ಷಿಣ ಆಫ್ರಿಕಾ, ನೈಜೀರಿಯಾ ಮತ್ತು ಭಾರತದಿಂದ ಬರುವ ಪ್ರಯಾಣಿಕರಿಗಾಗಿ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.