ಲಂಡನ್, ಜು.06(DaijiworldNews/HR): ಬ್ರಿಟನ್ನ ಸೇನಾ ಮುಖ್ಯಸ್ಥ ಜನರಲ್ ಸರ್ ನಿಕೋಲಸ್ ಕಾರ್ಟರ್ ಅವರನ್ನು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರು ಭೇಟಿಯಾಗಿ ಎರಡು ದೇಶಗಳ ನಡುವಿನ ರಕ್ಷಣಾ ಸಹಕಾರದ ಕುರಿತು ಚರ್ಚಿಸಿದ್ದಾರೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ.
ಜನರಲ್ ಎಂ.ಎಂ.ನರವಣೆ ಅವರು ಸೋಮವಾರ ಬ್ರಿಟನ್ಗೆ ಬಂದು ತಲುಪಿದ್ದಾರೆ ಎಂದು ಭಾರತೀಯ ಹೈಕಮಿಷನ್ ಹೇಳಿಕೆ ಬಿಡುಗಡೆ ಮಾಡಿದೆ.
ಇನ್ನು ಯುರೋಪ್ ಪ್ರವಾಸದಲ್ಲಿರುವ ನರವಣೆ ಅವರು ಬ್ರಿಟನ್ನಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಅವರು ಬ್ರಿಟನ್ನ ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಮತ್ತಿತರರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.