ಕಠ್ಮಂಡು, ಜು. 12 (DaijiworldNews/HR): ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಅವರನ್ನು ಎರಡು ದಿನದೊಳಗೆ ಪ್ರಧಾನಿಯನ್ನಾಗಿ ನೇಮಕ ಮಾಡಬೇಕು ಎಂದು ನೇಪಾಳದ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನೇಪಾಳದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ನ 5 ಸದಸ್ಯರ ಸಂವಿಧಾನ ಪೀಠ ಸೋಮವಾರ ಈ ತೀರ್ಪು ನೀಡಿದೆ.
ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ಐದು ತಿಂಗಳೊಳಗೆ ಎರಡನೇ ಬಾರಿಗೆ 275 ಸದಸ್ಯ ಬಲದ ಸಂಸತ್ತನ್ನು ವಿಸರ್ಜಿಸಿದ್ದು, ಪ್ರಧಾನಿ ಒಲಿ ಅವರ ಸಲಹೆಯಂತೆ ನವೆಂಬರ್ 12 ಮತ್ತು 19ರಂದು ಚುನಾವಣೆ ನಡೆಯಲಿದೆ ಎಂದು ಪ್ರಕಟಿಸಿದ್ದರು.
ಇನ್ನು ಅಧ್ಯಕ್ಷರು ಸಂಸತ್ತನ್ನು ವಿಸರ್ಜಿಸಿದ್ದನ್ನು ಪ್ರಶ್ನಿಸಿ ನೇಪಾಳಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಸಹಿತ 30 ಅರ್ಜಿಗಳು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿದ್ದವು ಎನ್ನಲಾಗಿದೆ.