ಡೊಮಿನಿಕಾ, ಜು.13 (DaijiworldNews/HR): ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪ ಎದುರಿಸುತ್ತಿರುವ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.
ಮೆಹುಲ್ ಚೋಕ್ಸಿಗೆ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಆಂಟಿಗುವಾ ಮತ್ತು ಬಾರ್ಬುಡಾಗೆ ತೆರಳಲು ಮಾತ್ರ ಈ ಜಾಮೀನು ನೀಡಲಾಗಿದ್ದು, ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ವರದಿಯಾಗಿದೆ.
ಇನ್ನು 2017 ನವೆಂಬರ್ನಿಂದ ಕೆರಿಬಿಯನ್ ಧ್ವೀಪ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ನಾಗರಿಕತ್ವ ಪಡೆದಿರುವ ಚೋಕ್ಸಿಯನ್ನು ಅಕ್ರಮವಾಗಿ ಪ್ರವೇಶಿಸಿದ ಕಾರಣಕ್ಕೆ ಮೇ 23ರಂದು ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು.