ಕಾಬೂಲ್, ಆ 26 (DaijiworldNews/MS): ಕ್ಷಣ ಕ್ಷಣಕ್ಕೂ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಬದಲಾಗುತ್ತಿದ್ದು, ಕಾಬೂಲ್ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸದಂತೆ ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿದೆ.
ಕಾಬೂಲ್ ವಿಮಾನ ನಿಲ್ದಾಣ ಅಪಾಯಕಾರಿ ಸ್ಥಿತಿಯಲ್ಲಿದ್ದು, ಉಗ್ರ ದಾಳಿ ಬೆದರಿಕೆ ಇರುವುದರಿಂದ ಭದ್ರತಾ ದೃಷ್ಟಿಯಿಂದ ಕಾಬೂಲ್ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಾರದು ಎಂದು ಬ್ರಿಟನ್ ಸರ್ಕಾರ ತನ್ನ ನಾಗರಿಕರಿಗೆ ಸೂಚನೆ ನೀಡಿದೆ.
ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಕಾರ್ ಬಾಂಬ್ ದಾಳಿ ಯನ್ನು ಇಸ್ಲಾಮಿಕ್ ಸ್ಟೇಟ್ ನಡೆಸುವ ಸಾಧ್ಯತೆ ಇರುವುದುದರಿಂದ ವಿಮಾನ ನಿಲ್ದಾಣದ ಪ್ರದೇಶದಲ್ಲಿದ್ದರೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿ ಮತ್ತು ಹೆಚ್ಚಿನ ಸಲಹೆಗಾಗಿ ನಿರೀಕ್ಷಿಸಿ ಎಂದು ಎಫ್ಸಿಡಿಒ ತನ್ನ ನಾಗರಿಕರಿಗೆ ಸೂಚಿಸಿದೆ.