ಕಾಬೂಲ್, ಆ. 30 (DaijiworldNews/HR): ತಾಲಿಬಾನ್ ಆಡಳಿತ ಅಫ್ಘಾನಿಸ್ತಾನದಲ್ಲಿ ಬಂದಿದ್ದು, ಇದೀಗ ತಾಲಿಬಾನಿಗಳು ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ನ್ಯೂಸ್ ರೂಮ್ನಲ್ಲಿ ನಿರೂಪಕನ ಸುತ್ತ 6-7 ಉಗ್ರರು ನಿಂತಿದ್ದನ್ನು ವಿಡಿಯೋದಲ್ಲಿ ಕಾಣುತ್ತಿದ್ದು, ತಾಲಿಬಾನಿಗಳಿಗೆ ಹೆದರಬೇಡಿ ಎಂದು ನಿಮ್ಮ ಸುದ್ದಿ ವಾಹಿನಿ ಮೂಲಕ ಹೇಳು..ಇಸ್ಲಾಮಿಕ್ ಆಡಳಿತಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳು, ತಾಲಿಬಾನಿಗಳನ್ನು ಹೊಗಳು’ಎಂದು ನಿರೂಪಕನಿಗೆ ಗನ್ ತೋರಿಸಿ, ಬಲವಂತವಾಗಿ ಹೇಳಿಸಿದ್ದಾರೆ.
ಇನ್ನು ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಕೆಲವು ಮಾಧ್ಯಮಗಳು ತಾಲಿಬಾನಿಗಳ ಆಡಳಿತ ಶುರುವಾಗುತ್ತಿದ್ದಂತೆ ತಮ್ಮಲ್ಲಿರುವ ಮಹಿಳಾ ಉದ್ಯೋಗಿಗಳನ್ನೆಲ್ಲ ಕೆಲಸದಿಂದ ತೆಗೆದುಹಾಕಿದ್ದಾರೆ.