ವಾಷಿಂಗ್ಟನ್, ಸೆ.16 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾದಲ್ಲಿ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುವಂತೆ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುಂಪು ಸಿಖ್ಖರು ಫಾರ್ ಜಸ್ಟಿಸ್ ಪ್ರತಿಜ್ಞೆ ಮಾಡಿದೆ.
ಸೆ.24ರಂದು ಪ್ರಮುಖ ನಾಲ್ಕು ದೇಶಗಳ ಮುಖಂಡರ ಪ್ರಥಮ ಕ್ವಾಡ್ ಸಮ್ಮೇಳನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾಕ್ಕೆ ಭೇಟಿ ನೀಡಿದ ಸಂದರ್ಭ ಶ್ವೇತಭವನದ ಹೊರಗೆ ಪ್ರತಿಭಟನೆ ನಡೆಸಲು ಸಿದ್ದತೆ ಮಾಡಿರುವುದಾಗಿ ಖಲಿಸ್ತಾನ ಭಯೋತ್ಪಾದಕ ಸಂಘಟನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದೆ.
ಪ್ರತಿಭಟನೆ ನಡೆಸಲು ರೈತರ ಮೇಲಿನ ಹಿಂಸಾಚಾರ ಕಾರಣ ಎಂದು ಭಯೋತ್ಪಾದಕ ಸಂಘಟನೆ ಉಲ್ಲೇಖಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾದಲ್ಲಿ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುವಂತೆ ಮಾಡುವುದಾಗಿ ಎಸ್ಎಫ್ಜೆಯ ಜನರಲ್ ಕೌನ್ಸಿಲ್ ಗುರುಪತ್ವಂತ್ ಸಿಂಗ್ ಪನ್ನುನ್ ಹೇಳಿದ್ದಾರೆ.
ಸೆಪ್ಟೆಂಬರ್ 24ರಂದು ಪ್ರಧಾನಿ ಮೋದಿ ಅವರು ವಾಷಿಂಗ್ಟನ್ನಲ್ಲಿ ನಡೆಯಲಿರುವ ಚತುಷ್ಕೋನ ಚೌಕಟ್ಟಿನ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಶೃಂಗಸಭೆಯಲ್ಲಿ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಅವರು ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನಿನ ಪ್ರಧಾನಿ ಯೋಶಿಹಿಡೆ ಸುಗಾ ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.