ಕಾಬೂಲ್, ಅ 06 (DaijiworldNews/MS): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರು ಸರ್ಕಾರ ರಚಿಸಿದ ನಂತರ ಇದೇ ಪ್ರಥಮ ಬಾರಿಗೆ ಮಂಗಳವಾರ ಬ್ರಿಟನ್ ರಾಜತಾಂತ್ರಿಕ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ.
ತಾಲಿಬಾನ್ ನಾಯಕರು ಬ್ರಿಟನ್ ಅಧಿಕಾರಿಗಳನ್ನು ಭೇಟಿ ಮಾಡಿರುವುದರಿಂದ ಪ್ರಸ್ತುತ ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ, ಆಹಾರದ ಕೊರತೆಯಂತಹ ಸಮಸ್ಯೆಗಳಿಗೆ ಒಂದಷ್ಟು ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ಭಾವಿಸಲಾಗಿದೆ.
ರಾಜಧಾನಿ ಕಾಬೂಲ್ನಲ್ಲಿ ಬ್ರಿಟಿಷ್ ರಾಜತಾಂತ್ರಿಕರೊಂದಿಗೆ ತಾಲಿಬಾನ್ಗಳ ಭೇಟಿಗೂ ಮುನ್ನ, ತಾಲಿಬಾನ್ ನಾಯಕರು ಇರಾನ್ ನಿಯೋಗವನ್ನು ಭೇಟಿಯಾಗಿ ವ್ಯಾಪಾರ ಒಪ್ಪಂದಗಳು ಸೇರಿದಂತೆ ಅಫ್ಗಾನಿಸ್ತಾನದಲ್ಲಿನ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯವಾದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ತಾಲಿಬಾನ್ ಈ ಮಧ್ಯೆ ಪ್ರತಿಸ್ಪರ್ಧಿ ಇಸ್ಲಾಮಿಕ್ ಸ್ಟೇಟ್ ಗುಂಪಿನ 11 ಸದಸ್ಯರನ್ನು ಬಂಧಿಸಿದೆ ಎಂದು ತಿಳಿಸಿದೆ.