ಕಂದಹಾರ್, ಅ 15 (DaijiworldNews/MS): : ಶುಕ್ರವಾರದ ಪ್ರಾರ್ಥನೆಯ ದಕ್ಷಿಣ ಪ್ರಾಂತ್ಯದ ಕಂದಹಾರ್ ನಗರದ ಪಿಡಿ -1 ಪ್ರದೇಶದಲ್ಲಿ ಇಮಾಮ್ ಬರ್ಗಾ ಮಸೀದಿಯ ಬಳಿ ಶುಕ್ರವಾರ ಸ್ಫೋಟ ಸಂಭವಿಸಿದ್ದು ಇದರಿಂದಾಗಿ 16ಕ್ಕೂ ಹೆಚ್ಚು ಜನರು ಮೃತಪಟ್ಟು, ಅನೇಕರು ಗಾಯಗೊಂಡಿರೋದಾಗಿ ಎಂದು ಅಧಿಕಾರಿಗಳು ಮತ್ತು ಪ್ರಾಂತೀಯ ನಾಯಕರು ತಿಳಿಸಿದ್ದಾರೆ.
ಕಂದಹಾರ್ ನಗರದ ಪೊಲೀಸ್ ಜಿಲ್ಲೆಯ (ಪಿಡಿ 1) ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಶಿಯಾ ಸಮುದಾಯಕ್ಕೆ ಸೇರಿದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದೆ.
ಶುಕ್ರವಾರ ಪ್ರಾರ್ಥನೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಿರುತ್ತದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಾವುನೋವುಗಳ ನಿಖರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ನೀಡಿಲ್ಲ. ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ.
ಈ ಹಿಂದೆ ಅಕ್ಟೋಬರ್ 8 ರಂದು, ಉತ್ತರ ಅಫ್ಘಾನಿಸ್ತಾನದಲ್ಲಿ ಮಸೀದಿ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದರು. ಸ್ಫೋಟವು ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ. ಈ ದಾಳಿಯನ್ನು ಆತ್ಮಹತ್ಯಾ ಬಾಂಬರ್ ನಡೆಸಿರುವ ಶಂಕೆ ವ್ಯಕ್ತವಾಗಿತ್ತು.