ಢಾಕಾ, ಅ.16 (DaijiworldNews/HR): ಇಸ್ಕಾನ್ ದೇವಾಲಯದ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಈ ವೇಳೆ ಓರ್ವ ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದ ನೊಖಾಲಿ ಜಿಲ್ಲೆಯಲ್ಲಿ ನಡೆದಿದೆ.
ದೇವಸ್ಥಾನದ ಮೇಲೆ ಸುಮಾರು 200ಕ್ಕೂ ಅಧಿಕ ಮಂದಿಯ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಇಸ್ಕಾನ್ ಸದಸ್ಯ ಪಾರ್ಥ ದಾಸ್ ಅವರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಪಾರ್ಥ ದಾಸ್ ಅವರ ಮೃತದೇಹ ದೇವಸ್ಥಾನದ ಸಮೀಪದ ಕೊಳದಲ್ಲಿ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶ ಸರ್ಕಾರಕ್ಕೆ ಕರೆ ನೀಡುವುದಾಗಿ ಇಸ್ಕಾನ್ ಸಮುದಾಯದ ಟ್ವೀಟರ್ ಖಾತೆಯಲ್ಲಿ ತಿಳಿಸಿದೆ.