ಇಸ್ಲಾಮಾಬಾದ್, ಅ.25 (DaijiworldNews/HR): ಭಾರತದ ವಿರುದ್ಧ ರಾಷ್ಟ್ರದ ಗೆಲುವು 'ಇಸ್ಲಾಂಗೆ ಗೆಲುವು' ಎಂದು ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಅವರು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಶೇಖ್ ರಶೀದ್ ಅವರು ಪಂದ್ಯದ ಸಮಯದಲ್ಲಿ ಭಾರತದಲ್ಲಿನ ಮುಸ್ಲಿಮರು ಸೇರಿದಂತೆ ವಿಶ್ವದಾದ್ಯಂತ ಮುಸ್ಲಿಮರು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದಿದ್ದಾರೆ.
ಇನ್ನು ಪಾಕಿಸ್ತಾನದ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು ನಾಯಕ ಬಾಬರ್ ಅಜಮ್ ಅವರ ಅದ್ಭುತ ಪ್ರದರ್ಶನದ ನಂತರ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ.
ಈ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನಿವಾರ ನಡೆದಿದೆ.