ಗ್ಲಾಸ್ಗೋ,, ನ. 02 (DaijiworldNews/HR): ಭಾರತ ವಿರೋಧಿ ಗುಂಪುಗಳ ಹಾಗೂ ಕೆಲವು ಪ್ರತ್ಯೇಕತಾವಾದಿ ಗುಂಪುಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸಮ್ಮತಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗ್ಲಾ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಶೃಂಗ್ಲಾ, "ಹವಾಮಾನ ಬದಲಾವಣೆ ಕುರಿತು ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಶೃಂಗಸಭೆ ಸಂದರ್ಭದಲ್ಲಿ ಉಭಯ ನಾಯಕರ ನಡುವಿನ ದ್ವಿಪಕ್ಷೀಯ ಮಾತುಕತೆ ವೇಳೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆದಿದೆ" ಎಂದು ತಿಳಿಸಿದ್ದಾರೆ.
ಇನ್ನು ಮೋದಿ–ಜಾನ್ಸನ್ ನಡುವಿನ ಮಾತುಕತೆ ವೇಳೆ ಭಾರತ ವಿರೋಧಿ ಗುಂಪುಗಳಿಂದ ಬ್ರಿಟನ್ನಲ್ಲಿ ಖಾಲಿಸ್ತಾನ ಪರ ಚಟುವಟಿಕೆಗಳು ನಡೆಯುತ್ತಿದೆ ಎಂಬ ವಿಷಯವೂ ಪ್ರಸ್ತಾಪವಾಗಿದ್ದು, ಈ ಬಗ್ಗೆ ಚರ್ಚೆ ನಡೆಯಿತು ಎಂದರು.