ಜೆರುಸಲೇಮ್, ನ. 28 (DaijiworldNews/HR): ಇಸ್ರೇಲ್ನಲ್ಲಿ ಹೆಚ್ಚುತ್ತಿರುವ ಕೊರೊನಾದ ಹೊಸ ತಳಿ 'ಓಮಿಕ್ರಾನ್'ನ ಸೋಂಕು ಪ್ರಕರಣಗಳನ್ನು ತಡೆಗಟ್ಟುವುದಕ್ಕಾಗಿ ಸರ್ಕಾರವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.
ಇಸ್ರೇಲ್ಗೆ ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ನಿರ್ಬಂಧ ಹೇರಿ ಸರ್ಕಾರವು ಆದೇಶ ಹೊರಡಿಸಿದೆ.
ಒಂದು ವೇಳೆ ದೇಶದೊಳಗೆ ಪ್ರವೇಶಿಸಬಯಸುವ ಪ್ರಯಾಣಿಕರು ಇಸ್ರೇಲ್ ಪ್ರಜೆಗಳಾಗಿದ್ದರೆ, ಅಂತವರು 14 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ (ಬಿ.1.1.529) 'ಓಮಿಕ್ರಾನ್' ಎಂಬ ಹೆಸರಿಡಲಾಗಿದ್ದು, ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.