ವಾಷಿಂಗ್ಟನ್, ಡಿ. 17 (DaijiworldNews/HR): ಭಾರತವನ್ನು ಗುರಿಯಾಗಿಸಿಕೊಂಡಿರುವ ಉಗ್ರ ಸಂಘಟನೆಗಳು ಪಾಕಿಸ್ತಾನದಿಂದಲೇ ಕಾರ್ಯಾಚರಣೆ ಮುಂದುವರಿಸಿದೆ ಎಂದು ಅಮೇರಿಕಾದ ವಿದೇಶಾಂಗ ವ್ಯವಹಾರಗಳ ಇಲಾಖೆಯುವರದಿಯಲ್ಲಿ ಉಲ್ಲೇಖಿಸಿದೆ.
ಸಾಂದರ್ಭಿಕ ಚಿತ್ರ
ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕನ್ ಭಯೋತ್ಪಾದನೆಗೆ ಸಂಬಂಧಿಸಿದ 2020ರ ವರದಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, "ಅಫ್ಗಾನಿಸ್ತಾನವನ್ನು ಗುರಿಯಾಗಿಸಿಕೊಂಡಿರುವ ಆಫ್ಗನ್ ತಾಲಿಬಾನ್ ಹಾಗೂ ಹಕ್ಕಾನಿ ನೆಟವರ್ಕ್, ಭಾರತವನ್ನು ಗುರಿಯಾಗಿಸಿಕೊಂಡಿರುವ ಲಷ್ಕರ್ ಎ ತೈಬಾ (ಎಲ್ಇಟಿ), ಅದರೊಂದಿಗೆ ಸಂಯೋಜನೆಗೊಂಡಿರುವ ಇತರೆ ಸಂಘಟನೆಗಳು ಹಾಗೂ ಜೈಷ್ ಎ ಮೊಹಮ್ಮದ್ ಉಗ್ರರ ಸಂಘಟನೆಗಳು ಪಾಕಿಸ್ತಾನದಿಂದ ಕಾರ್ಯಾಚರಣೆ ನಡೆಸುವುದು ಮುಂದುವರಿದಿದೆ" ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು 2008ರಲ್ಲಿ ನಡೆದ ಮುಂಬೈ ದಾಳಿಯ ಸಂಚು ಕೋರ ಸಾಜಿದ್ ಮಿರ್ ಹಾಗೂ ಜಾಗತಿಕ ಉಗ್ರರ ಪಟ್ಟಿಯಲ್ಲಿರುವ ಜೈಷ್ ಎ ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್, ಇಬ್ಬರೂ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿರುವುದಾಗಿ ತಿಳಿಯಲಾಗಿದೆ.