ಲಂಡನ್, ಡಿ.22 (DaijiworldNews/HR): ದುಬೈಯ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಪತ್ನಿ ಹಯಾ ಬಿಂಟ್ ಅಲ್ ಹುಸೇನ್(47) ಅವರಿಗೆ ವಿಚ್ಛೇದನ ನೀಡಿದ್ದು, ಒಟ್ಟು 5,527 ಕೋಟಿ ರೂಪಾಯಿ ಜೀವನಾಂಶ ಪಾವತಿಸಬೇಕು ಎಂದು ತಿಳಿದು ಬಂದಿದೆ.
ಬ್ರಿಟನ್ ಹೈಕೋರ್ಟ್ ಈ ತೀರ್ಪು ನೀಡಿದ್ದು, ಇದರಲ್ಲಿ 2,521 ಕೋಟಿ ರೂ.ಗಳನ್ನು ಪೂರ್ಣವಾಗಿ ಒಂದು ಮೊತ್ತದಲ್ಲಿ ಹಯಾಗೆ ಪಾವತಿಸಬೇಕು ಎಂದು ಹೇಳಿದೆ.
ರಶೀದ್ ಮತ್ತು ಹಯಾ ಬಿಂಟ್ ಅಲ್ ಹುಸೇನ್ ಅವರಿಗೆ ದಂಪತಿಗೆ ಅಲ್ ಜಲಿಲಿಯಾ(14) ಜಯದ್ (9) ಎಂಬ ಇಬ್ಬರು ಮಕ್ಕಳಿದ್ದಾರೆ.
ಇನ್ನು ಈ ಎರಡು ಮಕ್ಕಳ ಶಿಕ್ಷಣಕ್ಕಾಗಿ 96 ಕೋಟಿ ರೂ., ಹಾಗೂ ಜವಾಬ್ದಾರಿ ನಿಭಾಯಿಸಲು 112 ಕೋಟಿ ರೂ. ವಾರ್ಷಿಕವಾಗಿ ನೀಡಬೇಕಿದ್ದು, ಇತರೆ ಅಗತ್ಯತೆಗಳಿಗೆ 2,907 ಕೋಟಿ ರೂ.ಗಳನ್ನು ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ.