ಕರಾಚಿ, ಡಿ. 24 (DaijiworldNews/HR): ಚೆಕ್ಪೋಸ್ಟ್ವೊಂದರ ಮೇಲೆ ಉಗ್ರರು ದಾಳಿ ನಡೆಸಿ ಇಬ್ಬರು ಸೈನಿಕರನ್ನು ಹತ್ಯೆಗೈದ ಘಟನೆ ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿ ಇಂದು ನಡೆದಿದೆ.
ಸಾಂದರ್ಭಿಕ ಚಿತ್ರ
ಈ ಘಟನೆ ಬಲೂಚಿಸ್ಥಾನ ಪ್ರಾಂತ್ಯದ ಕೇಚ್ ಜಿಲ್ಲೆಯಲ್ಲಿ ನಡೆದಿದೆ ಎಂದು ಸೇನೆಯ ಮಾಧ್ಯಮ ವ್ಯವಹಾರಗಳ ವಿಭಾಗವಾದ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ತಿಳಿಸಿದೆ.
ಇನ್ನು ಭದ್ರತಾ ಪಡೆಗಳು ಉಗ್ರರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ ಎಂದು ವರದಿಯಾಗಿದೆ.