ಅಕ್ರಾ, ಜ 20 (DaijiworldNews/MS): ಪಶ್ಚಿಮ ಆಫ್ರಿಕಾದ ಘಾನಾ ದೇಶದ ರಾಜಧಾನಿ ಅಕ್ರಾದಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್ನ ಅಪಘಾತದಿಂದ ಉಂಟಾದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟು 59 ಮಂದಿ ಗಾಯಗೊಂಡಿದ್ದಾರೆ.
ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು, ಸ್ಫೋಟಕಗಳನ್ನು ಹೊತ್ತ ಟ್ರಕ್ ಬೈಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಸರ್ಕಾರ ಹೇಳಿದೆ. ಸ್ಫೋಟದಿಂದಾಗಿ ಸುತ್ತಮುತ್ತದ ಹಲವು ಕಟ್ಟಡಗಳಿಗೆ ಹಾನಿಯುಂಟಾಗಿದ್ದು ಕೆಲವು ಧರಾಶಾಹಿಯಾಗಿದೆ
"ಒಟ್ಟು 17 ಜನರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ ಮತ್ತು 59 ಗಾಯಗೊಂಡ ಜನರನ್ನು ರಕ್ಷಿಸಲಾಗಿದೆ" ಎಂದು ಮಾಹಿತಿ ಸಚಿವ ಕೊಜೊ ಒಪಾಂಗ್ ಎನ್ಕ್ರುಮಾ ಅವರು ರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಧಾನಿ ಅಕ್ರಾದಿಂದ 300 ಕಿಲೋ ಮೀಟರ್ ದೂರದಲ್ಲಿ ಬೊಗೊಸೊ ಎಂಬ ನಗರದ ಹತ್ತಿರ ಈ ದುರಂತ ಸಂಭವಿಸಿದೆ. ಸ್ಫೋಟದಿಂದ ದಟ್ಟ ಹೊಗೆ , ಬೆಂಕಿ ಹೊರಸೂಸಿದ್ದು ಸ್ಥಳೀಯರು ಉಸಿರುಗಟ್ಟುವ ವಾತಾವರಣದಿಂದ ಹೊರಗೆ ಓಡುತ್ತಿರುವುದು, ರಕ್ಷಣಾ ಕಾರ್ಯಕರ್ತರು ಅವಶೇಷಗಳ ನಡುವೆ ಬದುಕುಳಿದವರಿಗಾಗಿ ಹುಡುಕಾಡುತ್ತಿರುವುದನ್ನು ದೃಶ್ಯಾವಳಿಗಳಲ್ಲಿ ಕಾಣಬಹುದಾಗಿದೆ.
ಘಾನಾ ಅಧ್ಯಕ್ಷ ನಾನ ಅಕುಫೊೃ-ಅಡ್ಡೊ ಈ ದುರ್ಘಟನೆಯನ್ನು ತೀರಾ ದುರದೃಷ್ಟಕರ ಮತ್ತು ದುರಂತ ಎಂದು ಬಣ್ಣಿಸಿದ್ದಾರೆ.