ಸಿಂಧ್, ಫೆ 02(DaijiworldNews/MS): ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಸೋಮವಾರ ನಡೆದಿದೆ.
ಸಿಂಧ್ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಹತ್ಯೆಯಾದ ಉದ್ಯಮಿಯನ್ನು ಸತಾನ್ ಲಾಲ್ ಎಂದು ಗುರುತಿಸಲಾಗಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದೌರ್ಜನ್ಯದ ಮುಂದುವರಿದ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದಿದ್ದರು.
ಜನವರಿ 30 ರಂದು, ಪಾಕಿಸ್ತಾನದ ವಾಯುವ್ಯ ಪೇಶಾವರ್ ನಗರದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಒಬ್ಬ ಕ್ರಿಶ್ಚಿಯನ್ ಪಾದ್ರಿಯನ್ನು ಗುಂಡಿಕ್ಕಿ ಕೊಂದಿದ್ದರು ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದರು.