ಇಸ್ಮಾಮಾಬಾದ್, ಫೆ 09 (DaijiworldNews/KP): ಹಿಜಾಬ್ ಧರಿಸದಂತೆ ಮುಸ್ಲಿಂ ಹೆಣ್ಣು ಮಕ್ಕಳನ್ನು ತಡೆಯುವುದು ದಬ್ಬಾಳಿಕೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕಾಲೇಜು ಒಂದರಲ್ಲಿ ಶುರುವಾದ ಹಿಜಾಜ್ ವಿವಾದ ಸಂಘರ್ಷಕ್ಕೆ ಕಾರಣವಾಗಿ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದ್ದು, ಸದ್ಯ ಈ ಕುರಿತು ಪಾಕ್ ವಿದೇಶಾಂಗ ಸಚಿವ ಟ್ವೀಟ್ ಮಾಡಿದ್ದು, ಇದು ಮುಸ್ಲಿಂರ ಮೂಲಭೂತ ಹಕ್ಕು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಭಾರತದ ವ್ಯವಸ್ಥಿತ ಯೋಜನೆಯಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಹಿಜಾಬ್ ಧರಿಸದಂತೆ ಮುಸ್ಲಿಂ ಹೆಣ್ಣು ಮಕ್ಕಳನ್ನು ತಡೆಯುವುದು ದಬ್ಬಾಳಿಕೆ, ಈ ಮೂಲಕ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಪ್ರಯತ್ನ ಎಂದಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ದೂರವಿರುವಂತೆ ಮಾಡುವುದು ಮಾನವ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದಂತೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಹಾಗೂ ಅವರ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸದಂತೆ ಹೆಣ್ಣು ಮಕ್ಕಳನ್ನು ಭಯಭೀತಗೊಳಿಸುವುದು ಖಂಡಿತವಾಗಿಯೂ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.