ಮಾಸ್ಕೋ, ಫೆ 24 (DaijiworldNews/HR): ಲುಹಾನ್ಸ್ಕ್ ಪ್ರದೇಶದಲ್ಲಿ ಐದು ರಷ್ಯಾದ ವಿಮಾನಗಳು ಮತ್ತು ರಷ್ಯಾದ ಹೆಲಿಕ್ಯಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.
ರಷ್ಯಾ ಸೇನೆಯಿಂದ ಉಕ್ರೇನ್ ಮೇಲೆ ನಾನಾ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಹಲವು ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉಕ್ರೇನ್ನ ಅಧ್ಯಕ್ಷರು ಗುರುವಾರ ಸಮರ ಕಾನೂನನ್ನು ಘೋಷಿಸಿ, ರಷ್ಯಾ ಮಿಲಿಟರಿ ದಾಳಿ ಪ್ರಾರಂಭಿಸುವುದರಿಂದ ಭಯಪಡಬೇಡಿ ಎಂದು ನಾಗರಿಕರಿಗೆ ಧೈರ್ಯ ತುಂಬಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದು, ದೂರದರ್ಶನದ ಭಾಷಣದಲ್ಲಿ ಪುಟಿನ್, ಉಕ್ರೇನ್ನಿಂದ ಬರುತ್ತಿರುವ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ ಅವರು ಜಗತ್ತು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ ಎಂದು ಎಚ್ಚರಿಕೆ ನೀಡಿ, ವಿಪತ್ತು ಜೀವಹಾನಿ ಉಂಟುಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.