ಪೇಶಾವರ, ಮಾ 04 (DaijiworldNews/HR): ವಾಯವ್ಯ ಪಾಕಿಸ್ತಾನದ ಪ್ರಾಂತೀಯ ರಾಜಧಾನಿ ಪೇಶಾವರದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 30 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 30 ಜನರು ಮೃತಪಟ್ಟಿದ್ದು, 56 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಬಾಂಬ್ ಸ್ಫೋಟಗೊಂಡು ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.