ಟೋಕಿಯೋ, ಮಾ 17 (DaijiworldNews/DB): ಜಪಾನ್ ನ ಪೂರ್ವ ಭಾಗದಲ್ಲಿ ಬುಧವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿ, 97 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ.
ರಾತ್ರಿ ವೇಳೆಗೆ ಭೂಕಂಪ ಉಂಟಾಗಿದ್ದು, ಭೂಕಂಪದ ತೀವ್ರತೆ 7.4ರಷ್ಟುಇತ್ತು.
ಟೋಕಿಯೋ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಗಿದ್ದು, ಫುಕುಶಿಮಾ ಸಮುದ್ರ ತೀರದಲ್ಲಿ ಸಣ್ಣ ಪ್ರಮಾಣದ ಸುನಾಮಿ ಎದ್ದಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅಲ್ಲದೆ ಫುಕುಶಿಮಾ ಪ್ರದೇಶದ ಕರಾವಳಿಯಾಚೆ 60 ಕಿಲೋ ಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿರುವುದಾಗಿ ಭೂಗರ್ಭಶಾಸ್ತ್ರ ಇಲಾಖೆ ತಿಳಿಸಿದೆ. ನ್ಯೂಕ್ಲಿಯರ್ ರಿಯಾಕ್ಟರ್ ಹಾನಿಗೊಂಡು ಭಾರೀ ಪ್ರಮಾಣದಲ್ಲಿ ವಿಕಿರಣಗಳು ಹೊರಸೂಸಿತ್ತು.
ಭೂಕಂಪನದಿಂದಾಗಿ ಸುಮಾರು 2 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಈಶಾನ್ಯ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಜಪಾನ್ ಪ್ರಧಾನಿ ಫ್ಯುಮಿಯೊ ಕಿಶಿಡಾ ಗುರುವಾರ ಸಂಸದೀಯ ಮಂಡಳಿಯಲ್ಲಿ ತಿಳಿಸಿದ್ದಾರೆ.