ವಿಶ್ವಸಂಸ್ಥೆ, ಮಾ 18 (DaijiworldNews/MS): ರಷ್ಯಾ ಹಾಗೂ ಉಕ್ರೇನ್ ನಡುವಿನ ಕದನ 23ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ದದ ಪರಿಣಾಮ ಲಕ್ಷಾಂತರ ಜನ ಸಂಕಷ್ಟಕ್ಕೆ ಸಿಲುಕಿದ್ದು ಈ ಬಗ್ಗೆ ವಿಶ್ವಸಂಸ್ಥೆಯು ತೀವ್ರ ಕಳವಳ ವ್ಯಕ್ತಪಡಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಯುದ್ಧವನ್ನು ಕೊನೆಗೊಳಿಸಲು ರಾಜತಾಂತ್ರಿಕ ಮಾತುಕತೆಗೆ ಸಿದ್ಧ ಎಂದು ಭಾರತ ಹೇಳಿದೆ.
"ರಷ್ಯಾ ಮತ್ತು ಉಕ್ರೇನ್ ಯುದ್ದ ನಿಲ್ಲಿಸಲು ಸಂವಾದ ಮತ್ತು ರಾಜತಾಂತ್ರಿಕತೆಯ ಮಾರ್ಗವನ್ನು ಹೊರತುಪಡಿಸಿ ಬೇರೆ ದಾರಿಯಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ" ಒತ್ತಿ ಹೇಳಿರುವುದಾಗಿ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಗುರುವಾರ ಹೇಳಿದ್ದಾರೆ.
"ಮುಂಬರುವ ದಿನಗಳಲ್ಲಿ ಭದ್ರತಾ ಮಂಡಳಿಯಲ್ಲಿ ಮತ್ತು ಉಭಯ ದೇಶಗಳೊಂದಿಗೆ ರಾಜತಾಂತ್ರಿಕವಾಗಿ ತೊಡಗಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ" ಎಂದು ಅವರು ಹೇಳಿದರು.
ಪ್ರಧಾನಿ ಮೋದಿ ಅವರು ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇಬ್ಬರ ಜತೆಯೂ ಮಾತುಕತೆ ನಡೆಸಿದ್ದು, ಉಭಯ ದೇಶಗಳು ನೇರವಾಗಿ ಮಾತುಕತೆ ನಡೆಸುವಂತೆ ಒತ್ತಾಯಿಸಿದ್ದಾರೆ